ನಟ ದರ್ಶನಗೆ ನ್ಯಾಯಾಲಯದಿಂದ ಬಿಗ್ ರಿಲೀಫ್! ದರ್ಶನ ಅಭಿಮಾನಿಗಳು ಪುಲ್ ಖುಷ್.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ನಟ ದರ್ಶನ್ ತೂಗುದೀಪ್ ಅವರಿಗೆ ಜಾಮೀನು ನೀಡುವ ವೇಳೆ ಸೆಷನ್ಸ್ ಕೋರ್ಟ್ ವ್ಯಾಪ್ತಿ ಬಿಟ್ಟು ಹೊರ ಹೋಗುವಂತಿಲ್ಲ ಎಂದು ನ್ಯಾಯಾಲಯ ವಿಧಿಸಿದ್ದ ಷರತ್ತನ್ನು ಇಂದು ಹೈಕೋರ್ಟ್ ಸಡಿಲಿಸಿ ಆದೇಶಿಸಿದು ದರ್ಶನ ಅಭಿಮಾನಿಗಳಿಗೆ ಸಂತಷ ತಂದಿದೆ.
ದರ್ಶನ್ ಇನ್ನು ಮುಂದೆ ದೇಶವ್ಯಾಪಿ ಎಲ್ಲಿ ಬೇಕಾದರೂ ಓಡಾಡಬಹುದಾಗಿದೆ, ಜಾಮೀನು ನೀಡುವ ಸಂದರ್ಭದಲ್ಲಿ ವಿಧಿಸಿರುವ ಷರತ್ತು ಸಡಿಲಿಕೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಕಲಬುರಗಿ ಪೀಠ ಈ ಆದೇಶ ನೀಡಿದ್ದಾರೆ.
ಅರ್ಜಿದಾರರು ಹೆಸರಾಂತ ನಟರಾಗಿದ್ದು, ಅವರು ಚಿತ್ರೀಕರಣಕ್ಕಾಗಿ ರಾಜ್ಯದಲ್ಲದೇ ದೇಶದ ಇತರೆಡೆ ಸಂಚರಿಸಬೇಕಾಗುತ್ತದೆ. ಆದರೆ ನ್ಯಾಯಾಲಯ ಸೆಷನ್ಸ್ ಕೋರ್ಟ್ ವ್ಯಾಪ್ತಿ ಬಿಟ್ಟು ಹೊರಹೋಗುವಂತಿಲ್ಲ ಎಂದು ಷರತ್ತು ವಿಧಿಸಿರುವುದರಿಂದ ತೊಂದರೆ ಆಗುತ್ತಿದೆ. ಹಾಗಾಗಿ ನ್ಯಾಯಾಲಯ ಆ ಷರತ್ತನ್ನು ಸ್ವಲ್ಪ ಸಡಿಲಿಕೆ ಮಾಡಬೇಕು ಎಂದು ವಿಚಾರಣೆ ವೇಳೆ ದರ್ಶನ್ ಪರ ವಕೀಲರು ಮನವಿ ಮಾಡಿದರು.
ಅವಕಾಶ ನೀಡದಂತೆ ಎಸ್‌ಪಿಪಿ ಪ್ರಸನ್ನಕುಮಾರ್: ಆದರೆ ಅದಕ್ಕೆ ಆಕ್ಷೇಪ ಎತ್ತಿದ ಎಸ್‌ಪಿಪಿ ಪಿ.ಪ್ರಸನ್ನಕುಮಾರ್, ಜಾಮೀನು ಪಡೆಯುವಾಗ ಅರ್ಜಿದಾರರು ಅನಾರೋಗ್ಯದ ಕಾರಣ ನೀಡಿದ್ದರು. ಆದರೆ, ಇದೀಗ ದೇಶದೆಲ್ಲೆಡೆ ಸುತ್ತಾಡಲು ಬಯಸುತ್ತಿದ್ದಾರೆ. ನ್ಯಾಯಾಲಯ ಅದಕ್ಕೆ ಅವಕಾಶ ಕೊಡಬಾರದೆಂದು ಮನವಿ ಮಾಡಿದರು ಇವರ ಮನವಿಯನ್ನು ನ್ಯಾಯಾಲಯವು ತಿರಸ್ಕರಿಸಿತು.
0 Comments