ಬಾಗಲಕೋಟೆ ವಿಶ್ವವಿದ್ಯಾಲಯ ಮುಚ್ಚದಂತೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ಜಮಖಂಡಿ:ನಗರದಲ್ಲಿರುವ ಬಾಗಲಕೋಟೆ ವಿಶ್ವವಿದ್ಯಾಲಯವನ್ನು ಮುಚ್ಚಲು ಹೊರಟಿರುವ ಸರ್ಕಾರದ ನಿರ್ಧಾರವನ್ನು ಖಂಡಿಸಿ ಭಾರತ ವಿದ್ಯಾರ್ಥಿ ಒಕ್ಕೂಟ(ಎನ್‌ಎಸ್‌ಯುಐ)ನ ವತಿಯಿಂದ ಸೋಮವಾರ ಪ್ರತಿಭಟನೆ, ರಸ್ತೆ ತಡೆ ನಡೆಸಲಾಯಿತು.ಜಮಖಂಡಿ: ನಗರದಲ್ಲಿರುವ ಬಾಗಲಕೋಟೆ ವಿಶ್ವವಿದ್ಯಾಲಯವನ್ನು ಮುಚ್ಚಲು ಹೊರಟಿರುವ ಸರ್ಕಾರದ ನಿರ್ಧಾರವನ್ನು ಖಂಡಿಸಿ ಭಾರತ ವಿದ್ಯಾರ್ಥಿ ಒಕ್ಕೂಟ(ಎನ್‌ಎಸ್‌ಯುಐ)ನ ವತಿಯಿಂದ ಸೋಮವಾರ ಪ್ರತಿಭಟನೆ, ರಸ್ತೆ ತಡೆ ನಡೆಸಲಾಯಿತು.
ಟೈರ್‌ಗೆ ಬೆಂಕಿ ಹಚ್ಚಿ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತ ಪಡಿಸಿದರು. ನಗರದಲ್ಲಿರುವ ವಿಶ್ವವಿದ್ಯಾಲಯದಲ್ಲಿ 30 ಸಾವಿರ ವಿದ್ಯಾರ್ಥಿಗಳು ವ್ಯಾಸಾಂಗ ಮಾಡುತ್ತಿದ್ದು ಅವರ ಭವಿಷ್ಯದ ಜತೆಗೆ ಆಟವಾಡಬಾರದು ಎಂದು ಆಗ್ರಹಿಸಿದರು. ನಗರದ ಕುಂಚನೂರು ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದ ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಘೋಷಣೆ ಕೂಗಿ ರಸ್ತೆ ತಡೆ ನಡೆಸಿದ್ದರಿಂದ ಕೆಲ ಕಾಲ ರಸ್ತೆ ಸಂಚಾರಕ್ಕೆ ತೊಂದರೆ ಉಂಟಾಗಿತ್ತು. ಕಳೆದ ಎರಡು ವರ್ಷಗಳಿಂದ ಸರ್ಕಾರ ಬಾಗಕೋಟೆ ವಿವಿಗೆ ಯಾವುದೇ ಅನುದಾನ ನೀಡಿಲ್ಲವಾದರೂ ವಿವಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ.
ಜಿಲ್ಲಾ ಉಸ್ತುವಾರಿ ಸಚಿವ ತಿಮ್ಮಾಪೂರ ಹಾಗೂ ಸ್ಥಳೀಯ ಶಾಸಕರು, ಚುನಾಯಿತ ಪ್ರತಿನಿಧಿಗಳು, ಬಾಗಲಕೋಟೆ ವಿಶ್ವವಿದ್ಯಾಲಯವನ್ನು ಉಳಿಸಿಕೊಳ್ಳಬೇಕು ಎಂದು ಆಗ್ರಹಿಸಿದರು. ವಿಜಯ ತಿಪ್ಪರೆಡ್ಡಿ, ರಮೇಶ ಅಮಾತಿ, ಶಂಭು ಮೈಗೂರ, ಸಚಿನ ಅಂಬಿ, ವಿಜಯ ಮಾಂಗ, ರಮೇಶ ಮೇತ್ರಿ, ಪ್ರತೀಕ ದೇಸೂರಕರ, ಕಿರಣ ಢವಳೇಶ್ವರ, ಭಾನುಮತಿ ಕಟ್ಟಿಮನಿ, ಮುಂತಾದವರಿದ್ದರು.

0 Comments